Friday, 4 September 2015


Untitled132_20150812144342296

ಅಮೃತ ಬಳ್ಳಿ

* ಇದು ತ್ರಿದೋಷ ಗಳಿಂದ (ಅಂದರೆ ವಾತ, ಪಿತ್ತ, ಕಫ) ಉಂಟಾದ ತೊಂದರೆಗಳನ್ನು ನಿವಾರಿಸುತ್ತದೆ.
* ಎಲ್ಲ ಬಗೆಯ ಜ್ವರಗಳಿಗೂ (ಚಿಕುನ್
ಗುನ್ಯ, ಎಚ್೧ಎನ್೧ಜ್ವರ )
ಅಮೃತ ಬಳ್ಳಿ ಪರಿಣಾಮಕಾರಿ ಔಷಧಿ.
* ಅಮೃತ ಬಳ್ಳಿಯ ಕಾಂಡವನ್ನು ಜಜ್ಜಿ ರಸ ತೆಗೆದು ಜೇನುತುಪ್ಪದೊಂದಿಗೆ ಬೆರೆಸಿ ದಿನಕ್ಕೆ ಮೂರು ಬಾರಿಯಂತೆ
(ಆಹಾರ ಸೇವನೆಗೆ ಮುಂಚೆ) ಸೇವಿಸಬೇಕು.
* ಅಮೃತ ಬಳ್ಳಿಯ ಕಾಂಡವನ್ನು ಇತರ ಔಷಧೀಯ ಸಸ್ಯಗಳೊಂದಿಗೆ ಬೆರೆಸಿ ಕಷಾಯ ಮಾಡಿ ಕುಡಿಯಬಹುದು.
* ಈ ಕಷಾಯವನ್ನು ( ಸಂಬಾರ ಬಳ್ಳಿ, ಅಮೃತ ಬಳ್ಳಿ ಎಲೆ, ಮಜ್ಜಿಗೆ ಸೊಪ್ಪು, ತುಳಸಿ, ಲವಂಗ , ಅರಸಿನಪುಡಿ, ಕಾಳುಮೆಣಸು, ಜೀರಿಗೆ, ಶುಂಠಿ) ವಾರದಲ್ಲಿ ಒಂದು ಬಾರಿ ೧/೨ ಲೋಟದಂತೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿದರೆ ದೇಹದ ರೋಗ ನಿರೋಧಕ ಶಕ್ತಿ ಜಾಸ್ತಿಯಾಗುತ್ತದೆ.
* ಇದರ ಐದಾರು ಎಲೆಗಳನ್ನು ಪ್ರತಿನಿತ್ಯ ಸೇವಿಸಬಹುದು. ಎಲೆಯು ಸ್ವಲ್ಪ ಕಹಿ ಮತ್ತು ಒಗರಿನಿಂದ ಕೂಡಿದೆ.
* ಎಲೆ ಮತ್ತು ಕಾಂಡದಿಂದ ತಂಬುಳಿ ತಯಾರಿಸಬಹುದು.ಎಲೆ ಮತ್ತು ಕಾಂಡವನ್ನು ಜೀರಿಗೆಯೊಂದಿಗೆ ನುಣ್ಣಗೆ ಅರಿಯಬೇಕು. ಅದಕ್ಕೆ ಮಜ್ಜಿಗೆ ಸೇರಿಸಿ ಸಾಸಿವೆ ಒಗ್ಗರಣೆ ಕೊಟ್ಟರೆ ತಂಬುಳಿ ತಯಾರು.
131 total views, 1 views today

No comments:

Post a Comment