Friday, 4 September 2015

ರಾಘವೇಂದ್ರ ಎನ್ನಿರಿ


ರಾಘವೇಂದ್ರ ರಾಘವೇಂದ್ರ ರಾಘವೇಂದ್ರನೆನ್ನಿರಿ
ನಾಮಸ್ಮರಣೆಯಿಂದ ನಿಜಾನಂದವನ್ನು ಹೊಂದಿರಿ

ತಂದೆ ತಾಯಿ ಬಂಧು ಬಳಗ ಎಲ್ಲ ನೀನೆ ಎನ್ನಿರಿ
ನಾನು ಎಂಬ ಮೋಹ ಮರೆತು ಎಂದೂ ಅವನ ನಂಬಿರಿ

ಹೇಗೆ ಇರಲಿ ಎಲ್ಲೆ ಇರಲಿ...ಅವನ ಸ್ಮರಣೆ ಮಾಡಿರಿ
ಧ್ಯಾನದಿಂದ ಮನವ ಸುಡುವ ಚಿಂತೆ ದೂರ ಮಾಡಿರಿ

ಮಾನ ಪ್ರಾಣ ಧನವು ಎಲ್ಲ ಸ್ವಾಮಿ ನಿನ್ನದೆನ್ನಿರಿ
ಗುರುವೆ ನಿನ್ನ ಕರುಣೆಯೊಂದೆ ಸಾಕು ನನಗೆ ಎನ್ನಿರಿ

ಕಲ್ಲು ಮುಳ್ಳೊ ಸಿಡಿಲೊ ಮಳೆಯೊ ಅವನ ಕರುಣೆಯೆನ್ನಿರಿ
ಏನೇ  ಬರಲಿ ಅವನದೆಂದು ನಂಬಿ ಮುಂದೆ ನಡೆಯಿರಿ

ರಾಘವೇಂದ್ರ ರಾಘವೇಂದ್ರ ರಾಘವೇಂದ್ರನೆನ್ನಿರಿ
ನಾಮಸ್ಮರಣೆಯಿಂದ ನಿಜಾನಂದವನ್ನು ಹೊಂದಿರಿ

ನಿಮ್ಮ ಮನೆಯ ನಿಮ್ಮ ಮನದ ವಿಷಯವೆಲ್ಲ ಬಲ್ಲನು
ಚಪಲದಿಂದ ಅಲೆವ ಮನದಲೆಂದು ಗುರುವು ನಿಲ್ಲನು

ಕೊಡುವುದೆಲ್ಲ ಕೊಡುವನವನು ಇನ್ನು ಆಸೆಯೇತಕೆ
ಕಲ್ಪವೃಕ್ಷದಂತೆ ಗುರುವು ಇರಲು ಚಿಂತೆಯೇತಕೆ

ರಾಘವೇಂದ್ರ ರಾಘವೇಂದ್ರ ರಾಘವೇಂದ್ರನೆನ್ನಿರಿ
ನಾಮಸ್ಮರಣೆಯಿಂದ ನಿಜಾನಂದವನ್ನು ಹೊಂದಿರಿ

ಸಾಹಿತ್ಯ: ಚಿ ಉದಯಶಂಕರ್

No comments:

Post a Comment