Friday, 4 September 2015

ದಾಸನ ಮಾಡಿಕೊ ಎನ್ನ

ದಾಸನ ಮಾಡಿಕೊ ಎನ್ನ ಸ್ವಾಮಿ
ಸಾಸಿರ ನಾಮದ ವೆಂಕಟರಮಣ

ದುರ್ಬುದ್ಧಿಗಳನೆಲ್ಲ ಬಿಡಿಸೊ ನಿನ್ನ
ಕರುಣ-ಕವಚವೆನ್ನ ತೊಡಿಸೊ
ಚರಣಸೇವೆ ಎನಗೆ ಕೊಡಿಸೊ ಅಭಯ
ಕರ ಪುಷ್ಪವನೆನ್ನ ಶಿರದಲ್ಲಿ ಮುಡಿಸೊ

ದೃಢಭಕ್ತಿ ನಿನ್ನಲ್ಲಿ ಬೇಡಿ ನಾ
ಅಡಿಗೆರಗುವೆನಯ್ಯ ಅನುದಿನ ಪಾಡಿ
ಕಡೆಗಣ್ಣಲೇಕೆನ್ನ ನೋಡಿಬಿಡುವೆ
ಕೊಡು ನಿನ್ನ ಧ್ಯಾನವ ಮನಶುಚಿ ಮಾಡಿ

ಮೊರೆಹೊಕ್ಕವರ ಕಾವ ಬಿರುದು ಎನ್ನ
ಮರೆಯದೆ ರಕ್ಷಣೆ ಮಾಡಯ್ಯ ಪೊರೆದು
ದುರಿತಗಳೆಲ್ಲವ ತರಿದು ಸಿರಿ
ಪುರಂದರ ವಿಠಲ ಎನ್ನನು ಪೊರೆದು

ಸಾಹಿತ್ಯ: ಪುರಂದರದಾಸರು

No comments:

Post a Comment