Friday, 4 September 2015

ತರವಲ್ಲ ತಗಿ ನಿನ್ನ ತಂಬೂರಿ



ತರವಲ್ಲ ತಗಿ ನಿನ್ನ ತಂಬೂರಿ
ಸ್ವರ ಬರದೆ ಬಾರಿಸದಿರು ತಂಬೂರಿ 
ಸರಸ ಸಂಗೀತದ ಕುರುಹುಗಳನರಿಯದೆ
ಬರದೆ ಬಾರಿಸದಿರು ತಂಬೂರಿ

ಮದ್ದಲಿ ದನಿಯೊಳು ತಂಬೂರಿ ಅದ
ತಿದ್ದಿ ನುಡಿಸಬೇಕು ತಂಬೂರಿ
ಸಿದ್ಧ ಸಾಧಕರ ಸುವಿದ್ಯೆಗೆ ಒದಗುವ
ಬುದ್ಧಿವಂತಗೆ ತಕ್ಕ ತಂಬೂರಿ
ಬಾಳ ಬಲ್ಲವರಿಗೆ ತಂಬೂರಿ ದೇವ-
ಬಾಳಾಕ್ಷ ರಚಿಸಿದ ತಂಬೂರಿ
ಹೇಳಲಿ ಏನಿದರ ಹಂಚಿಕೆ ಅರಿಯದ
ತಾಳಗೇಡಿಗೆ ಸಲ್ಲ ತಂಬೂರಿ

ಸತ್ಯಶರಧಿಯೊಳು ತಂಬೂರಿ
ಉತ್ತಮರಾಡುವ ತಂಬೂರಿ
ಬತ್ತೀಸರಾಗದಿ ಬಗೆಯನರಿಯದಂಥ
ಕತ್ತೀಗಿನ್ಯಾತಕೆ ತಂಬೂರಿ

ಅಸಮ ಸುಮ್ಯಾಳಕ ತಂಬೂರಿ
ಕುಶಲರಿಗೊಪ್ಪುವ ತಂಬೂರಿ
ಶಿಶುನಾಳಾಧೀಶನ ಓದು ಪುರಾಣದಿ
ಹಸನಾಗಿ ಬಾರಿಸೊ ತಂಬೂರಿ

ಸಾಹಿತ್ಯ: ಶಿಶುನಾಳ ಶರೀಫ್ ಸಾಹೇಬರು

No comments:

Post a Comment